ಪಾಲಕ್

ಪಾಲಕ್
Spinacia oleracea from Otto Wilhelm Thomé's 1885 Flora von Deutschland, Österreich und der Schweiz
Scientific classification
ಸಾಮ್ರಾಜ್ಯ:
plantae
(ಶ್ರೇಣಿಯಿಲ್ಲದ್ದು):
ಅಂಜೀಯೋಸ್ಪೆರ್ಮ್ಸ್
(ಶ್ರೇಣಿಯಿಲ್ಲದ್ದು):
ಯೂಡಿಕೋಟ್ಸ್
(ಶ್ರೇಣಿಯಿಲ್ಲದ್ದು):
ಕೋರ್ ಯೂಡಿಕೋಟ್ಸ್
ಗಣ:
Caryophyllales
ಕುಟುಂಬ:
ಅಮರಾಂಥೇಸಿ
ಉಪಕುಟುಂಬ:
Chenopodioideae
ಪಂಗಡ:
Anserineae
ಕುಲ:
ಸ್ಪಿನಾಸಿಯ

L.
Species
  • Spinacia oleracea
  • Spinacia tetrandra
  • Spinacia turkestanica
ಪಾಲಕ್

ಪಾಲಕ್ (ಸ್ಪಿನಾಸಿಯಾ ಆಲರೇಸಿಯಾ) ಅಮರಾಂಥೇಸಿಯೇ ಕುಟುಂಬದಲ್ಲಿನ ಒಂದು ತಿನ್ನಲರ್ಹವಾದ ಹೂಬಿಡುವ ಸಸ್ಯ. ಅದು ಮಧ್ಯ ಹಾಗೂ ದಕ್ಷಿಣಪಶ್ಚಿಮ ಏಷ್ಯಾಕ್ಕೆ ಸ್ಥಳೀಯವಾಗಿದೆ. ಅದು ೩೦ ಸೆ.ಮಿ. ನಷ್ಟು ಎತ್ತರಕ್ಕೆ ಬೆಳೆಯುವ ಒಂದು ವಾರ್ಷಿಕ ಸಸ್ಯ (ಅಪರೂಪವಾಗಿ ದ್ವೈವಾರ್ಷಿಕ). ಇದು ಸುಮಾರು ೩೦ ಸೆ.ಮೀ ವರೆಗು ಬೆಳೆಯುತ್ತದೆ.

ಉಪಯೋಗಗಳು

ತರಕಾರಿಯಾಗಿ ಆಡುಗೆಯಲ್ಲಿ ಉಪಯೋಗಿಸಲ್ಪಡುತ್ತದೆ. ಪಾಲಕ್ ಸೊಪ್ಪಿನಲ್ಲಿ ಹೇರಳವಾಗಿ ನಾರಿನಂಶ,ಪ್ರೋಟಿನ್‍ಗಳು ಇವೆ. ಮುಖ್ಯವಾಗಿ ಇದರಲ್ಲಿ ಕಬ್ಬಿಣಾಂಶ ಇದೆ. ಪಾಲಕ್ ಸೊಪ್ಪನ್ನು ವಾರಕ್ಕೆ ೩ ಬಾರಿ ಸೇವಿಸಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಹೇಗೆ ಇದು ಆರೋಗ್ಯಕ್ಕೆ ಒಳ್ಳೆಯದೋ ಹಾಗೆಯೇ ಇದು ತ್ವಚೆಗೆ ಕೂಡ ಒಳ್ಳೆಯದು. ಪಾಲಕ್ ಸೊಪ್ಪಿನಲ್ಲಿರುವ ಅಂಶಗಳು ಸೋರಿಯಾಸಿಸ್, ತುರಿಕೆ ಮತ್ತು ಒಣಚರ್ಮವನ್ನು ತಡೆಯುವುದಕ್ಕೆ ತುಂಬ ಒಳ್ಳೆಯದು. ಇದು ಕೂದಲ ಬೆಳವಣಿಗೆಗೂ ಬಹಳ ಒಳ್ಳೆಯದು. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಬಿ,ಸಿ,ಇ ಪೊಟ್ಯಾಷಿಯಂ,ಕಬ್ಬಿಣ ಮತ್ತು ಒಮೆಗಾ ೩ ಕೊಬ್ಬಿನ ಆಮ್ಲಗಳಿವೆ ಈ ಅಂಶಗಳು, ಕೂದಲ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅದರಲ್ಲು ಪಾಲಕ್ ಸೊಪ್ಪಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕಬ್ಬಿಣದ ಅಂಶ ಕೆಂಪು ರಕ್ತಕಣಗಳನ್ನು ಬಲಪಡಿಸಿ ಆಮ್ಲಜನಕವನ್ನು ಪ್ರತಿ ಕೂದಲ ಬುಡಕ್ಕು ತಲುಪಿಸಲು ಸಹಾಯಕಾರಿ ಆಗಿದೆ. ಪಾಲಕ್ ಸೊಪ್ಪಿನ ನಿಯಮಿತ ಸೇವನೆಯಿಂದ ಕೂದಲ ಉದುರುವಿಕೆಯನ್ನು ತಡೆಯಬಹುದು. ಕೂದಲು ಉದುರುವುದಕ್ಕೆ ಮುಖ್ಯ ಕಾರಣವೆಂದರೆ ಕೂದಲ ಬುಡದಲ್ಲಿ ಕಬ್ಬಿಣ ಅಂಶದ ಕೊರತೆಯಿಂದ ಪಾಲಕ್ ಸೊಪ್ಪು ಕಬ್ಬಿಣದ ಅಂಶವನ್ನು ಕೂದಲ ಬುಡಕ್ಕೆ ಒದಗಿಸುವುದರಿಂದ ಕೂದಲು ಉದುರುವುದು ಕ್ರಮೇಣ ಕಡಿಮೆ ಆಗುತ್ತದೆ. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ಎ ಇರುವುದರಿಂದ ಇವುಗಳು ತ್ವಚೆಯ ಸೆಳೆತ ಮತ್ತು ಕಾಂತಿ ಹೆಚ್ಚಿಸಲು ನೆರವಾಗುತ್ತದೆ, ಹಾಗೆಯೇ ವಿಟಮಿನ್ ಸಿ ಹೊಸ ಜೀವಕೋಶಗಳ ಹುಟ್ಟಿಗೆ ನೆರವಾಗುತ್ತದೆ.

ಅಲ್ಲದೆ ಹಳೆಯ ಕಲೆಗಳಿಂದ ಕೂಡಿರುವ ತ್ವಚೆಯ ಭಾಗವನ್ನು ಇದು ತಿಳಿಯಾಗಿಸುತ್ತದೆ. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಕೆ ಇದ್ದು, ಇದು ಬಿಸಿಲಿನಿಂದ ಕಪ್ಪಗಿರುವ ಚರ್ಮವನ್ನು ಸಹಜ ಬಣ್ಣಕ್ಕೆ ತರಲು ನೆರವಾಗುತ್ತದೆ. ಪಾಲಕ್ ಸೊಪ್ಪು ಸೂರ್ಯನ ಕಿರಣಗಳಿಂದ ರಕ್ಷಣೆ ನೀಡುತ್ತದೆ. ಪಾಲಕ್ ಸೊಪ್ಪಿನಲ್ಲಿರುವ ವಿಟಮಿನ್ ಬಿ ಸೂರ್ಯನ ಕಿರಣಗಳಿರುವ ಹಾನಿಕಾರಕ ಅತಿನೇರಳೆ ಕಿರಣಗಳ ಪ್ರಭಾವದಿಂದ ರಕ್ಷಣೆ ನೀಡುತ್ತದೆ. ಅತಿನೇರಳೆ ಕಿರಣಗಳು ತ್ವಚೆಯನ್ನು ಸುಟ್ಟಂತೆ ಮಾಡುವ ಕ್ಯಾನ್ಸರ್ ಮತ್ತು ವೃದ್ಧಾಪ್ಯದ ಕುರುಹುಗಳು ಬೇಗ ಬರುವಂತೆ ಮಾಡುತ್ತದೆ, ಆದರೆ ಪಾಲಕ್ ಸೊಪ್ಪು ಕ್ಯಾನ್ಸರ್ ಮತ್ತು ವೃದ್ಧಾಪ್ಯ ಬರದಂತೆ ತಡೆಯುತ್ತದೆ.

ಬಾಹ್ಯ ಸಂಪರ್ಕಗಳು

  • "Spinacia L." Integrated Taxonomic Information System.
  • Spinacia at Tropicos